ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಯ ಬಗ್ಗೆ ಕಾನೂನು ಕ್ರಮ : ಸಚಿವ ಮಾಧುಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.15- ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಯ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಆರಂಭಕ್ಕೆ ಬೆಲ್ ಭಾರಿಸಲಾಗಿತ್ತು. ಬೆಲ್ ನಿಂತ ಬಳಿಕವೇ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡ ಅವರು ಕುಳಿತಿದ್ದರು. ಬೆಲ್ ನಿಲ್ಲುವ ಮೊದಲು ಯಾರು ಕುಳಿತಿರಲಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದರು.

ತಮ್ಮ ಮೇಲೆ ಅವಿಶ್ವಾಸ ನಿರ್ಣಯ ಕೇಳಿ ಬಂದ ತಕ್ಷಣವೇ ಸಭಾಪತಿ ಅವರು ಪರಿಷತ್‍ನ ಗೌರವ ಉಳಿಸುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕಿತ್ತು. ಆದರೆ ಅಧಿಕಾರ ಉಳಿಸಿಕೊಳ್ಳುವ ಹುನ್ನಾರದಲ್ಲಿ ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕಾರ ಏನು ಸಾಧ್ಯವೊ ಅದನ್ನು ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.

Facebook Comments