‘ಸರ್ಕಾರದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ’

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಜ.26- ಸಚಿವ ಸ್ಥಾನ ತ್ಯಾಗ ಮಾಡಬೇಕೆಂಬ ಪರಿಸ್ಥಿತಿ ಎದುರಾದರೆ ಖುಷಿಯಿಂದ ತ್ಯಜಿಸುತ್ತೇನೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮನ್ನು ಕೈಬಿಡಲಾಗುತ್ತದೆಂಬ ಮಾತು ಕೇಳಿಬರುತ್ತಿದೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷಕ್ಕೆ ಒಳೆಯದಾಗುವುದಾದರೆ ಶಾಸಕ ಸ್ಥಾನವನ್ನೂ ಬಿಡಲು ಸಿದ್ದ ಎಂದರು.

ತಾವಿದ್ದ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಶಾಸಕರಿಗೆ ಮೊದಲು ಸಂಪುಟದಲ್ಲಿ ಆದ್ಯತೆ ನೀಡಬೇಕಾಗಿದೆ. ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಇರಬೇಕೆಂಬುದು ತಮ್ಮ ಅಭಿಪ್ರಾಯ. ಅದರಂತೆ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ಸಚಿವ ಸ್ಥಾನ ಬಿಡಬೇಕು ಎಂದಾದರೆ ನಾನು ಕುರ್ಚಿ ಬಿಟ್ಟುಕೊಡಲು ಸಿದ್ದ ಎಂದು ಹೇಳಿದರು.

Facebook Comments