ಮಡಿಕೇರಿಯಲ್ಲಿ ಜನಜೀವನ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ, ಸೆ.9- ಎಡಬಿಡದಂತೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ.

ಕೊಡಗು ಜಿಲ್ಲೆಯ ತಲಕಾವೇರಿ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮ ಮೂರನೆ ಬಾರಿಗೆ ಜಲಾವೃತಗೊಂಡಿದೆ. ಭಾಗಮಂಡಲ, ನಾಪಕ್ಲು ರಸ್ತೆ ಸಂಪೂರ್ಣವಾಗಿ ಕಡಿತ ಗೊಂಡಿದ್ದು , ತಲಕಾವೇರಿ ರಸ್ತೆ ಕೂಡ ಕಡಿತವಾಗಿದೆ. ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದ್ದು , ಬದಲಿ ಮಾರ್ಗವನ್ನು ಅನುಸರಿಸುವಂತಾಗಿದೆ.

Facebook Comments