ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್‍ ಹೆಸರಿಡಲು ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.4- ಮಾಗಡಿ ರಸ್ತೆಯಲ್ಲಿರುವ ನಮ್ಮ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್‍ಕುಮಾರ್ ಮೆಟ್ರೋ ನಿಲ್ದಾಣ ಎಂದು ಹೆಸರಿಡಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಮೇಯರ್ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

ಕನ್ನಡ ತಾಯಿಯ ಹೆಮ್ಮೆಯ ಪುತ್ರ ಡಾ.ರಾಜ್‍ಕುಮಾರ್ ಅವರು ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆಗಳ ಉಳಿವಿಗಾಗಿ ತಮ್ಮದೇ ಆದ ರೀತಿಯಲ್ಲಿ ಅಪೂರ್ವ ಸೇವೆ ಮಾಡಿದ್ದಾರೆ.

ಕನ್ನಡ ನಾಡಿನ ಕೀರ್ತಿಯನ್ನು ಜಗತ್ತಿನಾದ್ಯಂತ ಹರಡಿರುವ ಅವರ ವ್ಯಕ್ತಿತ್ವಕ್ಕೆ ಗೌರವ ಸೂಚಿಸುವ ಉದ್ದೇಶದಿಂದ ಮಾಗಡಿ ರಸ್ತೆಯಲ್ಲಿರುವ ನಮ್ಮ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್‍ಕುಮಾರ್ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರಕ್ಕೆ ಕಳುಹಿಸಿಕೊಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೇಯರ್ ಅವರಲ್ಲಿ ರಮೇಶ್ ಅವರು ಮನವಿ ಮಾಡಿದ್ದಾರೆ.

Facebook Comments

Sri Raghav

Admin