ಮಹಾಶಿವರಾತ್ರಿ : ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.21- ಮಹಾಶಿವರಾತ್ರಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ದೇಶದ ಜನರಿಗೆ ಶುಭ ಕೋರಿದ್ದಾರೆ. ಶಿವನು ಎಲ್ಲರ ಬದುಕಿನಲ್ಲಿ ಸುಖ, ಸಂತೋಷ ಮತ್ತು ಸಮೃದ್ಧಿ ನೀಡಲಿ ಎಂದು ಗಣ್ಯರು ಪ್ರಾರ್ಥಿಸಿದ್ದಾರೆ.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್‍ಸಿಂಗ್, ಮಾಜಿ ರಾಷ್ಟ್ರಪತಿ ಪ್ರಣವ್‍ಮುಖರ್ಜಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್‍ಸಿಂಗ್, ನಿರ್ಮಲಾಸೀತಾರಮನ್, ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕರಾದ ಸೋನಿಯಗಾಂಧಿ, ರಾಹುಲ್‍ಗಾಂಧಿ, ಹಲವಾರು ಪಕ್ಷಗಳ ಮುಖಂಡರು ದೇಶದ ಜನತೆಗೆ ಶಿವರಾತ್ರಿ ಶುಭಾಯ ಕೋರಿದರು.

Facebook Comments