ಮಹಾರಾಷ್ಟ್ರ ಡಿಸಿಎಂಗೂ ಕೋವಿಡ್-19 ಸೋಂಕು

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಅ.26-ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಪ್ರತಿಷ್ಠಿತಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಎನ್‍ಸಿಪಿ ಮುಖಂಡ ಪವಾರ್, ನನಗೆ ಕೋವಿಡ್-19 ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಶೀಘ್ರ ಗುಣಮುಖವಾಗಿ ಹಿಂದಿರುಗುತ್ತೇನೆ. ನನ್ನ ಆರೋಗ್ಯದ ಬಗ್ಗೆ ಕಾರ್ಯಕರ್ತರು ಆತಂಕಕ್ಕೆ ಒಳಗಾಗಬೇಕಿಲ್ಲ. ನಾನು ಗುಣಮುಖನಾಗಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.

Facebook Comments

Sri Raghav

Admin