ಶಿವಸೇನೆಗೆ ಹರಿಭಾವ್ ಜಾಧವ್ ಗುಡ್ ಬೈ..!

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಆ.27- ಮಹಾರಾಷ್ಟ್ರದ ಶಿವಸೇನಾ ವರಿಷ್ಠ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪಕ್ಷದ ಸಂಸದ ಸಂಜಯ್ ಹರಿಭಾವ್ ಜಾಧವ್ ಅವರು ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ನನ್ನ ಕ್ಷೇತ್ರದ ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದ ಮೇಲೆ ಸಂಸದನಾಗಿರಲು ನನಗೆ ಯಾವುದೇ ಹಕ್ಕಿಲ್ಲ. ಆದ್ದರಿಂದ, ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಪರಭಾನಿ ಜಿಲ್ಲೆಯ ಜಿಂತೂರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಸರ್ಕಾರೇತರ ಆಡಳಿತಾಕಾರಿ ನೇಮಕಕ್ಕೆ ಜಾಧವ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಭಾನಿಯ ಜಿಂತೂರ್ ಎಪಿಎಂಸಿಯ ಆಡಳಿತಾಕಾರಿಗಳ ನೇಮಕ ಕುರಿತು ನಾನು ಕಳೆದ 8-10 ತಿಂಗಳಿಂದ ಪ್ರಯತ್ನ ನಡೆಸುತ್ತಾ ಬಂದಿದ್ದೇನೆ. ಈಗ ಎನ್‍ಸಿಪಿಯ ವ್ಯಕ್ತಿಯೊಬ್ಬರನ್ನು ಸರ್ಕಾರೇತರ ಆಡಳಿತಾಕಾರಿಯಾಗಿ ನೇಮಕ ಮಾಡಲಾಗಿದೆ.

ಇದು ಶಿವಸೇನೆ ಕಾರ್ಯಕರ್ತರಿಗೆ ಮಾಡಿದ ಅವಮಾನ¿ ಎಂದು ತಿಳಿಸಿರುವ ಜಾಧವ್, ನನ್ನಕ್ಷೇತ್ರದ ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದಮೇಲೆ ಸಂಸದನಾಗಿರಲು ನನಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಪರ್ಭಾನಿ ಲೋಕಸಭಾ ಕ್ಷೇತ್ರದಲ್ಲಿ 16 ಹಾಗೂ 17ನೇ ಲೋಕಸಭೆಗೆ ಆಯ್ಕೆಯಾದ ಸಂಜಯ್ ಅವರು ಬಂಧು ಜಾಧವ್ ಎಂದೇ ಜನಪ್ರಿಯರಾಗಿದ್ದಾರೆ. ಇದಲ್ಲದೆ 2009-2014ರ ಅವಯಲ್ಲಿ ಮಹಾರಾಷ್ಟ್ರ ವಿಧಾನಸಭೆಗೂ ಶಿವಸೇನೆಯಿಂದ ಆಯ್ಕೆಯಾಗಿದ್ದರು.

ಪರ್ಭಾನಿ ಕ್ಷೇತ್ರದ ಜಿಂತೂರ್ ಎಪಿಎಂಸಿ ಆಡಳಿತಾಕಾರಿಗಳ ನೇಮಕಾತಿಯಲ್ಲಿ ಎನ್‍ಸಿಪಿ ನಾಯಕರ ಹಸ್ತಕ್ಷೇಪದ ಬಗ್ಗೆ ಸಂಜಯ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ, ಶಿವಸೇನೆಯ ನಿಷ್ಠರನ್ನು ಬದಿಗೊತ್ತಿ, ಎನ್ಸಿಪಿ ಬೆಂಬಲಿತ ವ್ಯಕ್ತಿಯನ್ನು ನೇಮಿಸಿರುವುದಕ್ಕೆ ಸಂಜಯ್ ಬೇಸರ ವ್ಯಕ್ತಪಡಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿಯಿದೆ.

Facebook Comments

Sri Raghav

Admin