‘ನಾನು ಕಾಂಗ್ರೆಸ್‍ನಲ್ಲೇ ಇರ್ತೀನಿ’ : ಮಹೇಶ್ ಕುಮಟಳ್ಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 27- ಆಪರೇಷನ್ ಕಮಲದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾನು ಕಾಂಗ್ರೆಸ್ಸಿನವನು, ಕಾಂಗ್ರೆಸ್‍ನಲ್ಲೇ ಇರುತ್ತೇನೆ. ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾಕ್ಕೆ ಹೋಗಿದ್ದೆ ಎಂಬ ಸುದ್ದಿಯಾಗಿದೆ. ಇದು ಆಧಾರ ರಹಿತ. ನಾನು ಎಲ್ಲಿಗೂ ಹೋಗುವುದೂ ಇಲ್ಲ ಎಂದರು.ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರೊಂದಿಗೆ ಕಾಂಗ್ರೆಸ್ ಶಾಸಕರೂ ಇದ್ದಾರೆ, ನಾನೂ ಇದ್ದೇನೆ. ನಿಗಮ ಮಂಡಳಿ ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ.

ಅಭಿವೃದ್ಧಿ ರಾಜಕಾರಣದ ಬಗ್ಗೆ ನಂಬಿಕೆ ಹೊಂದಿರುವವನು ನಾನು ಎಂದು ತಿಳಿಸಿದರು. ಕುಡಿಯುವ ನೀರಿನ ವಿಚಾರವಾಗಿ ಕೃಷ್ಣಾ ನದಿಯಿಂದ ನೀರು ಹರಿಸುವ ಸಂಬಂಧ ಬೆಂಗಳೂರಿನಲ್ಲೇ ಇದ್ದೇನೆ. ಏನೇ ಚರ್ಚೆಗಳು ಆಗಿರಬಹುದು. ಆದರೆ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಂದು ವೇಳೆ ಇದ್ದರೂ ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಸಿಎಂ ಜೊತೆ ಮಾತುಕತೆ :  ಲೋಕಸಭಾ ಚುನಾವಣೆ ನಂತರದ ಬೆಳವಣಿಗೆ, ಸಂಪುಟ ವಿಸ್ತರಣೆ, ಕಾಯತಂತ್ರ ಸೇರಿದಂತೆ ಇನ್ನಿತರ ವಿಷಯಗಳ ಕುರಿತಂತೆ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ , ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಮಹೇಶ್‍ಕುಮಟಳ್ಳಿ ಮಾತುಕತೆ ನಡೆಸಿದರು.

ಮಾಜಿಪ್ರಧಾನಿ ಜವಾಹರಲಾಲ್ ನೆಹರೂ ಅವರ 55ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಬಳಿಯ ನೆಹರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚರ್ಚೆ ನಡೆಸಿದರು.

ಬಿಜೆಪಿ ಆಪರೇಷನ್ ಕಮಲ, ಸರ್ಕಾರದ ಅಸ್ಥಿರತೆ ಹಿನ್ನೆಲೆಯಲ್ಲಿ ಇವರ ಚರ್ಚೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕುಮಾರ್‍ಸ್ವಾಮಿ, ಪರಮೇಶ್ವರ್ ಅವರು, ಗಹನವಾದ ಚರ್ಚೆಯಲ್ಲಿ ತೊಡಗಿದ್ದರು.  ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಹೇಶ್ ಕುಮಟಳ್ಳಿ ಸಹ ಇವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಕಾರ್ಯಕ್ರ

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ