‘ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಇರ್ತೀನಿ, ವಿಶ್ವನಾಥ್‌ರವರಿಗೆ ಮಂತ್ರಿಸ್ಥಾನ ಕೊಡಿ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ.

ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ ಮಾತನಾಡಿಲ್ಲ. ಮತ್ತೆ ಮಾತನಾಡುತ್ತೇವೆ. ನನಗೆ ಮಂತ್ರಿಯಾಗುವ ಆಸೆ ಇಲ್ಲ. ಆದರೆ, ಯಡಿಯೂರಪ್ಪನವರು ಕೊಟ್ಟ ಮಾತು ಉಳಿಸಿಕೊಳ್ಳಬೇಕು.

ನನಗೆ ಕೊಡದಿದ್ದರೂ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ನನ್ನ ಆಗ್ರಹವಾಗಿದೆ ಎಂದು ಅವರು ಹೇಳಿದರು. ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ ಎಂದು ಕುಮಟಳ್ಳಿ ಹೇಳಿದರು.

Facebook Comments