ಸಚಿವ ಸ್ಥಾನ ಸಿಗದಿರುವುದಕ್ಕೆ ಮಹೇಶ್ ಕುಮಟಳ್ಳಿ ಹೇಳಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.6- ನಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನವಿಲ್ಲ ಎಂದು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಾಸಕ ಮಹೇಶ್ ಕುಮಟಳ್ಳಿ, ಮಾಜಿ ಶಾಸಕ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಾಗಿರುವುದು ನಿಜ.

ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನಾಯಕರಿಗೆ ಮುಜುಗರ ಉಂಟು ಮಾಡುವ ಕೆಲಸ ಮಾಡುವುದಿಲ್ಲ ಎಂದು ಹೇಳಿದರು. ಯಾವ ಕಾರಣದಿಂದ ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂಬುದು ತಿಳಿದಿಲ್ಲ. ಮುಖ್ಯಮಂತ್ರಿಗಳು ಸಚಿವ ಸ್ಥಾನ ನೀಡಲು ಆಗುವುದಿಲ್ಲ ಎಂದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ಮಾಡುತ್ತೇನೆ. ನಾನು ಸಚಿವನಾಗಲು ಏನು ತೊಂದರೆ ಇದೆಯೋ ಗೊತ್ತಿಲ್ಲ ಎಂದು ಹೇಳಿದರು.

ಸಿಎಂ ಮೇಲೆ ವಿಶ್ವಾಸ:  ಎಂಟಿಬಿ ನಾಗರಾಜ್ ಮಾತನಾಡಿ, ನನಗೆ ಸಚಿವ ಸ್ಥಾನ ಸಿಗದಿರವುದಕ್ಕೆ ಬೇಸರವಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ನಮಗೂ ಅವಕಾಶ ಸಿಕ್ಕುವ ಭರವಸೆ ಇದೆ ಎಂದು ಹೇಳಿದರು.

Facebook Comments