ಚಲುವರಾಯಸ್ವಾಮಿ ಹೇಳಿಕೆಯಲ್ಲಿ ಹುರುಳಿಲ್ಲ: ಸಾ.ರಾ.ಮಹೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಸೆ.16- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೋವಾಗುವ ರೀತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಜೆಡಿಎಸ್ ಶಿವಕುಮಾರ್ ಪರವಾಗಿ ಹೋರಾಟದಲ್ಲಿ ಪಾಲ್ಗೊಂಡಿದೆ ಎಂದು ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರ ತಾಯಿಯನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

ಅದೇ ರೀತಿ ಶಾಸಕಿ ಅನಿತಾಕುಮಾರಸ್ವಾಮಿ ಕೂಡ ಡಿಕೆಶಿ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಆದರೂ ಶಿವಕುಮಾರ್ ಪರವಾಗಿ ಅವರಿಲ್ಲ ಎಂದು ದೂಷಿಸುವುದು ಸರಿಯಲ್ಲ ಎಂದು ಸಾ.ರಾ.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Facebook Comments