ಉತ್ತರ ಕನ್ನಡ ಜಿಲ್ಲೆಯ ಮಹಿಮಾ ಗ್ರಾಮಕ್ಕೆ ಬಸ್ ಸೌಲಭ್ಯ : ಸುರೇಶ್ ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.15- ಉತ್ತರ ಕನ್ನಡ ಜಿಲ್ಲೆಯ ಮಹಿಮಾ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೊಂದರೆಗೊಳಗಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸಾರಿಗೆ ಸಚಿವರ ಜೊತೆ ಮಾತನಾಡಿ ಶೀಘ್ರವೇ ಇದಕ್ಕೆ ಪರಿಹಾರ ದೊರಕಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭರವಸೆ ನೀಡಿದರು.

ವಿಧಾನಪರಿಷತ್‍ನ ಶೂನ್ಯ ವೇಳೆಯಲ್ಲಿ ಬಿಜೆಪಿಯ ನೂತನ ಸದಸ್ಯ ಮುನಿರಾಜೇಗೌಡ ಅವರು ವಿಷಯ ಪ್ರಸ್ತಾಪಿಸಿ ಮಹಿಮಾ ಗ್ರಾಮದಲ್ಲಿ ಬಸ್ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು 7-8 ಕಿ.ಮೀ. ನಡೆದು ಶಾಲೆಗೆ ಹೋಗಬೇಕು. ಇದರಿಂದ ಹೆಣ್ಣುಮಕ್ಕಳು ಶಿಕ್ಷಣವನ್ನೇ ಮೊಟಕುಗೊಳಿಸಿದ್ದಾರೆ. ಪ್ರೌಢಶಾಲೆಗೆ 20 ಕಿ.ಮೀ., ಪದವಿ ಕಾಲೇಜಿಗೆ 40 ಕಿ.ಮೀ. ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಅದಕ್ಕೆ ಉತ್ತರ ನೀಡಿದ ಸಚಿವರು, ನಾನು ಮಹಿಮಾ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಅಲ್ಲಿ ಸಾರಿಗೆ ಸಮಸ್ಯೆ ಇರುವುದು ನಿಜ. ಈಗಾಗಲೇ ಸಾರಿಗೆ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ಬಸ್ ಸೌಲಭ್ಯ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Facebook Comments