ಮಕರ ಸಂಕ್ರಾಂತಿ ಹಬ್ಬಕ್ಕೆ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.15- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸುಗ್ಗಿಯ ಹಬ್ಬವಾದ ಮಕರ ಸಂಕ್ರಾಂತಿ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ಹಾಗೂ ಸಂತೋಷ ತರಲಿ ಎಂದು ಮುಖ್ಯಮಂತ್ರಿ ಹಾರೈಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ದೇವೇಗೌಡರು ಕೋರಿದ್ದಾರೆ.

ನೇಸರನು ತನ್ನ ಪಥ ಬದಲಿಸುತ್ತಿರಲು ಮಾಗಿಯ ಚಳಿಯು ಮಾಯವಾಗುತ್ತಿರಲು ತನುಮನದಲ್ಲಿ ಹೊಸ ಚೈತನ್ಯ ಮೂಡಲಿ. ಹೊಸ ಬೆಳೆ ಹೊಸ ಕ್ರಾಂತಿ ಜಗದಲ್ಲಿ ಹರಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ ನೆಮ್ಮದಿ ತರಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಸಂಸದ ಬಿ.ಎನ್.ಬಚ್ಚೇಗೌಡ ಸೇರಿದಂತೆ ಹಲವು ಗಣ್ಯರು ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Facebook Comments

Sri Raghav

Admin