ಯುಗಾದಿ ಸಂದರ್ಭದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಭೇಟಿ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.4- ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಯುಗಾದಿ ಸಂದರ್ಭದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಯನ್ನು ನಿಷೇಸಲಾಗಿದೆ. ಏ.10ರಿಂದ 13ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದ್ದು, ದೇವರ ದರ್ಶನ, ಮಹಾರಥೋತ್ಸವ, ವಿಶೇಷ ಪೂಜಾ ಕಾರ್ಯಗಳು ಪ್ರತಿ ವರ್ಷ ನಡೆಯುತ್ತಿದ್ದವು. ಜನಪ್ರತಿನಿಗಳು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದರು.

ಪಾದಯಾತ್ರೆ ಮೂಲಕವೂ ರಾಜ್ಯದ ನಾನಾ ಭಾಗಗಳಿಂದ ಯಾತ್ರಿಗಳು ಆಗಮಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಪ್ರತಿ ವ್ಯಕ್ತಿಯಿಂದ ವ್ಯಕ್ತಿಗೆ 3.25 ಚ.ಮೀ ಅಂತರ ಕಾಯ್ದುಕೊಳ್ಳಬೇಕಿದೆ.

ಹೀಗಾಗಿ 200 ಜನರ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಜಾತ್ರೆಯಲ್ಲಿ ಭಾಗವಹಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್ ಬಳಸಬೇಕೆಂದು ಸೂಚನೆ ನೀಡಲಾಗಿದೆ.

37.5 ಡಿಗ್ರಿ ಸೆಲ್ಷಿಯಸ್‍ಗಿಂತ ದೇಹ ಉಷ್ಣಾಂಶ ಹೊಂದಿರುವವರು, ಶೀತ, ಕೆಮ್ಮು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರು ಜಾತ್ರೆಯಲ್ಲಿ ಪಾಲ್ಗೊಳ್ಳಬಾರದು, ದೇವಸ್ಥಾನದ ಆವರಣದಲ್ಲಿ ಗುಂಪುಗೂಡುವುದು, ರಾತ್ರಿ ತಂಗುವುದನ್ನು ನಿಷೇಸಲಾಗಿದೆ.

ದೇವರ ದರ್ಶನಕ್ಕೆ ಗರಿಷ್ಠ 20 ನಿಮಿಷಗಳ ಅವಕಾಶ ಕಲ್ಪಿಸಲಾಗುತ್ತದೆ. ಸಾಮೂಹಿಕ ಪ್ರಸಾದ ತಯಾರಿಕೆ ಮತ್ತು ವಿತರಣೆಗೂ ಕೂಡ ಕಡಿವಾಣ ಹಾಕಲಾಗಿದೆ ಎಂದು ಜಿಲ್ಲಾಕಾರಿ ಡಾ.ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನದ ಅರ್ಚಕರು, ಸಿಬ್ಬಂದಿ, ಕೆಲಸದ ನಿಮಿತ್ತ ತೆರಳುವ ಅಕಾರಿಗಳು ಮತ್ತು ಜನಪ್ರತಿನಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಜಾತ್ರೆಯನ್ನು ಸರಳವಾಗಿ ಆಚರಿಸುವಂತೆ ತಾಕೀತು ಮಾಡಲಾಗಿದೆ.

Facebook Comments

Sri Raghav

Admin