ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ನಾನು ಕೇಳಲಿಲ್ಲ: ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.24- ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಬೆಂಗಳೂರಿನ ಮನೆಯಲ್ಲಿ ಯಾವ ಸಭೆಗಳು ನಡೆದಿಲ್ಲ. ಮುನಿಯಪ್ಪ ಸೇರಿದಂತೆ ಯಾರೂ ನನ್ನನ್ನು ಭೇಟಿ ಮಾಡಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರ ಹುದ್ದೆಯನ್ನು ನಾನು ಕೇಳಲಿಲ್ಲ. ಅಧ್ಯಕ್ಷರಾಗುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ಈ ಬಗ್ಗೆ ಯಾರಾದರೂ ಪ್ರಚಾರ ಮಾಡುತ್ತಿದ್ದರೆ ಅದು ಸುಳ್ಳು ಎಂದು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರನ್ನು ಹೈಕಮಾಂಡ್ ಮಾಡಲಿದೆ. ಯಾರನ್ನು ನೇಮಕಾತಿ ಮಾಡಲಿದೆ, ಯಾವಾಗ ನೇಮಕ ಮಾಡುತ್ತದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

Facebook Comments