‘ನಾನು ಯಾರಿಗೂ ಖೆಡ್ಡ ತೋಡಿಲ್ಲ’ : ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಬುರ್ಗಿ,ಅ.9-ನಾನು ಯಾರಿಗೂ ಯಾವುದೇ ರೀತಿಯ ಖೆಡ್ಡಾ ತೋಡಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ತಮ್ಮ ಮನೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಭಿನ್ನಾಭಿಪ್ರಾಯಗಳಿವೆ. ಪ್ರಜಾಪ್ರಭುತ್ವದಲ್ಲಿ ಅದು ಸಹಜವಾದ ಬೆಳವಣಿಗೆ.

ಯಾರಿಗಾದರೂ ಅಸಮಾಧಾನವಿದ್ದರೆ ಅದನ್ನು ನಾಯಕರುಗಳ ಮುಂದೆ ಹೇಳಿಕೊಳ್ಳಲಿ ಪಕ್ಷ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುತ್ತದೆ ಎಂದರು.ಕಾಂಗ್ರೆಸ್ ಸಮುದ್ರವಿದ್ದಂತೆ. ಇಲ್ಲಿ ಎಲ್ಲರಿಗೂ ಅವಕಾಶಗಳಿವೆ. ಮೂಲ ಕಾಂಗ್ರೆಸಿಗರು, ವಲಸಿಗರು ಎಂಬ ಬೇಧಭಾವವಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ನಾನು ಯಾರಿಗೂ ಟಿಕೆಟ್ ತಪ್ಪಿಸಿಲ್ಲ. ಟಿಕೆಟ್ ಹಂಚಿಕೆಯಲ್ಲಿ ಒಬ್ಬ ವ್ಯಕ್ತಿಯ ಅಭಿಪ್ರಾಯ ಆಧರಿಸಿ ನಡೆಯುವುದಿಲ್ಲ. ಈ ಬಾರಿ ಗೆಲ್ಲುವವರನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಖರ್ಗೆ ವ್ಯಕ್ತಪಡಿಸಿದರು.

Facebook Comments