‘ಬಿಜೆಪಿಯ ಕನಸು ನನಸಾಗುವುದಿಲ್ಲ’ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಏ.23-ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿಯ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನ ಮಾಡುವ ಬಿಜೆಪಿಯ ಕನಸು ಯಾವುದೇ ಕಾರಣಕ್ಕೂ ನನಸಾಗುವುದಿಲ್ಲ. ರಮೇಶ್ ಜಾರಕಿ ಹೊಳಿ ಅವರ ರಾಜೀನಾಮೆ, ಬಾಂಬ್‍ಗಿಂಬ್ ಏನೂ ಆಗಿಲ್ಲ. ಯಾವುದೂ ನಡೆಯುವುದಿಲ್ಲ.

ಮತದಾನದ ದಿನದ ಈ ರೀತಿ ಮಾತನಾಡುವುದು ಸರಿಯಲ್ಲ. ಜಾತ್ಯತೀತ ಶಕ್ತಿಗಳು ಒಂದಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿವೆ. ಇನ್ನೂ ನಾಲ್ಕು ವರ್ಷಗಳ ಕಾಲ ಸುಭದ್ರವಾಗಿ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು.

ಈ ಸರ್ಕಾರ ರಚನೆಯಾದಾಗಿನಿಂದ ಬಿಜೆಪಿ ಪತನಗೊಳಿಸುವ ಕೆಲಸ ಮಾಡುತ್ತಾ ಬಂದಿದೆ. ಆದರೆ ಯಶಸ್ವಿಯಾಗಿಲ್ಲ. ಮುಂದೆಯೂ ಯಶಸ್ವಿಯಾಗುವುದೂ ಇಲ್ಲ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ