ಕಾಂಗ್ರೆಸ್ ನಲ್ಲಿನ ಅಸಮಾಧಾನ ಕುರಿತು ಖರ್ಗೆ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

mallikarjun-kharge
ಕಲಬುರ್ಗಿ, ಜೂ.8- ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಇದೆಲ್ಲಾ ಸಹಜ. ಇದೆನ್ನೆಲ್ಲ ಬದಿಗಿಟ್ಟು ಪಕ್ಷಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವೆ ಗುಂಪುಗಾರಿಕೆ ನಡೆಯುತ್ತಿದೆ ಎಂಬೆಲ್ಲ ಸತ್ಯಕ್ಕೆ ದೂರವಾದದ್ದು, ಅವರದೊಂದು ದಾರಿ, ಇವರದೊಂದು ದಾರಿ ಅನ್ನೋದೆಲ್ಲ ಕೇವಲ ಊಹಾಪೋಹ ಎಂದರು.

ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ ಸಿದ್ದಾಂತವಾದ ಜಾತ್ಯತೀತ ತತ್ವ, ಪ್ರಜಾಪ್ರಭುತ್ವ ರಕ್ಷಣೆ ಉದ್ದೇಶದಿಂದ ಎಲ್ಲರೂ ಸಹಕರಿಸುವ ಅಗತ್ಯವಿದೆ. ಅಸಮಾಧಾನ ಸಹಜ. ಇದಕ್ಕೆ ಮತ್ತಷ್ಟು ತುಪ್ಪ ಸುರಿಯುವುದು ಬೇಡ. ಎಲ್ಲರೂ ಭಿನ್ನಾಭಿಪ್ರಾಯ, ಅಸಮಾಧಾನ ಬದಿಗಿಟ್ಟು ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ಜೆಡಿಎಸ್‍ಗೆ ಐದು ವರ್ಷ ಅಧಿಕಾರ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ನಮ್ಮ ಅಭಿಪ್ರಾಯ ಬದಿಗೊತ್ತಿ ಹೈಕಮಾಂಡ್ ಆದೇಶಕ್ಕೆ ಎಲ್ಲರೂ ಬದ್ಧವಾಗಿರಬೇಕು. ವರಿಷ್ಠರ ಸೂತ್ರ ಪಾಲನೆ ಕೆಲಸವನ್ನು ನಾವೆಲ್ಲರೂ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Facebook Comments

Sri Raghav

Admin