ಜಿಎಸ್‍ಟಿ ಬಾಕಿ ಪಾವತಿಸುವಂತೆ ಪ್ರಧಾನಿಗೆ ಮಮತಾ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಕೊತ್ತಾ, ನ.24- ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಿಎಸ್‍ಟಿ ಬಾಕಿಯನ್ನು ಪಾವತಿಸುವಂತೆ ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.

ಕೊರೊನಾ ಲಸಿಕೆ ನಿರ್ವಹಣೆ ಮತ್ತು ಹಂಚಿಕೆ ಸಂಬಂಧಪಟ್ಟಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಕೊರೊನಾ ಸ್ಥಿತಿಗತಿಯ ಬಗ್ಗೆ ವಿವರಣೆ ನೀಡಿದ್ದಲ್ಲದೆ ಕೇಂದ್ರ ಸರ್ಕಾರ ಜಿಎಸ್‍ಟಿ ತೆರಿಗೆ ಪಾಲನ್ನು ಸರಿಯಾಗಿ ಪಾವತಿ ಮಾಡಿಲ್ಲ ಎಂಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಆರ್ಥಿಕ ಸಮಸ್ಯೆಯಾಗಿದೆ. ರಾಜ್ಯಗಳಿಗೆ ಜಿಎಸ್‍ಟಿಯಿಂದ ಬರಬೇಕಾದ ಪಾಲನ್ನು ಬಿಡುಗಡೆ ಮಾಡಿಸುವಂತೆ ಮನವಿ ಮಾಡಿದ್ದಾರೆ.

Facebook Comments