ಕೊರೊನಾ ಸೋಂಕಿತ ಮಹಿಳೆಯರ ಮೇಲೂ ಕಾಮುಕರ ಕಣ್ಣು.!

ಈ ಸುದ್ದಿಯನ್ನು ಶೇರ್ ಮಾಡಿ

ನೋಯ್ಡಾ(ಉ.ಪ್ರ.),ಜು.28- ಡೆಡ್ಲಿ ಕೊರೊನಾ ಸೋಂಕಿನಿಂದ ನರಳುತ್ತಾ ಆಸ್ಪತ್ರೆಗಳ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯರ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದೇಶದ ಕೆಲವಡೆ ವರದಿಯಾಗುತ್ತಿದೆ.

ಕಳೆದ ವಾರ ದೆಹಲಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ವರದಿಯಾಗಿದೆ.

ನೋಯ್ಡಾದ ಖಾಸಗಿ ಅಸ್ಪತ್ರೆಯೊಂದರ ಐಸೋಲೇಷನ್ ವಾರ್ಡ್‍ನಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 20 ವರ್ಷ ಮಹಿಳೆಯೊಬ್ಬರಿಗೆ ವೈದ್ಯರೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.

ಐಸೋಲೇಷನ್ ವಾರ್ಡ್‍ನಲ್ಲಿ ಈ ಮಹಿಳೆ ಜೊತೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವೈದ್ಯ ಈ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸ್ಥಳೀಐ ಎಕ್ಸ್‍ಪ್ರೆಸ್ ಹೈವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಸೋಲೇಷನ್ ವಾರ್ಡ್‍ನಲ್ಲಿ ಮಹಿಳೆ ಮತ್ತು ಸೋಂಕಿಗೆ ಒಳಗಾದ ವೈದ್ಯನನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ವೈದ್ಯ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ನೀಡಿರುವ ದೂರನ್ನು ಆಧರಿಸಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಮಹಿಳೆ ಇದ್ದ ಐಸೋಲೇಷನ್ ವಾರ್ಡ್‍ನಲ್ಲಿ ಸೋಂಕಿತ ಪುರುಷ ವೈದ್ಯನನ್ನು ಇರಿಸಿದ ಆಸ್ಪತ್ರೆ ವಿರುದ್ಧವೂ ದೂರು ದಾಖಲಾಗಿದೆ.

Facebook Comments

Sri Raghav

Admin