ಬದುಕಿದ್ದವನನ್ನು ಸತ್ತಿದ್ದಾನೆಂದು ಪೋಷಕರಿಗೆ ‘ಜೀವಂತ ಶವ’ ನೀಡಿದ ವೈದ್ಯರು..!

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ , ಏ.12 -ಬಿಹಾರದ ರಾಜಧಾನಿಯಲ್ಲಿರುವ ಸರ್ಕಾರಿ ಆಸ್ಪತ್ರೆಯೊಂದು ಜೀವಂತ ಕೊರೊನಾ ರೋಗಿ ಮೃತಪಟ್ಟಿದ್ದಾನೆ ಎಂದು ಘೋಷಿಸಿ ಇನ್ನೊಬ್ಬ ವ್ಯಕ್ತಿಯ ಶವವನ್ನು ಅವನ ಸಂಬಂಧಿಕರಿಗೆ ಹಸ್ತಾಂತರಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದ ಪಾಟ್ನಾ ಜಿಲ್ಲಾಯ ರ್ಬಾ ಉಪವಿಭಾಗದ ಮಹಮದ್‍ಪುರ ಗ್ರಾಮದ ನಿವಾಸಿ ಚುನ್ನು ಕುಮಾರ್ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಅಧಿಕಾರಿಗಳು ಘೋಷಿಸಿ ಇನ್ನೊಬ್ಬ ವ್ಯಕ್ತಿಯ ಶವವನ್ನು ತನ್ನ ಸಹೋದರನಿಗೆ ಹಸ್ತಾಂತರಿಸಿದ್ದರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಅವರು ಆಸ್ಪತ್ರೆಯ ಅಧಿಕಾರಿಗಳಿಗೆ ಪತ್ರ ಬರೆದು ಈ ವಿಷಯದ ಬಗ್ಗೆ ತನಿಖೆ ನಡೆಸಿ 24 ಗಂಟೆಗಳ ಒಳಗೆ ಘಟನೆಗೆ ಕಾರಣರಾದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಮುಂದೆ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

Facebook Comments