ಅನಾರೋಗ್ಯದಿಂದ ಕಾರಲ್ಲೇ ಸಾವನ್ನಪ್ಪಿದ ವ್ಯಕ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ನ.8- ಅನಾರೋಗ್ಯದಿಂದ ವ್ಯಕ್ತಿಯೊಬ್ಬ ಕಾರಿನಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಶಿವಕುಮಾರ್ (42) ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

ಕಳೆದ ಮೂರು ದಿನಗಳ ಹಿಂದೆ ಅವರು ಕಾರಿನಲ್ಲಿ ಮಂಡ್ಯಕ್ಕೆ ಬಂದಿದ್ದರು. ವಿಮ್ಸ್ ಆಸ್ಪತ್ರೆ ಬಳಿ ಬಂದಾಗ ಅವರಿಗೆ ಹೃದಯಾಘಾತ ಸಂಭವಿಸಬಹುದು ಎಂದು ಶಂಕಿಸಲಾಗಿದೆ.

ಮೂರು ದಿನವಾದರೂ ಮನೆಗೆ ಬಾರದಿರುವುದರಿಂದ ಆತಂಕಗೊಂಡ ಕುಟುಂಬದ ಸದಸ್ಯರು ಕಿರುಗಾವಲು ಠಾಣೆಗೆ ದೂರು ನೀಡಿದ್ದಾರೆ. ವಿಮ್ಸ್ ಆಸ್ಪತ್ರೆ ಮುಂಭಾಗ ಕಾರು ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಶಿವಕುಮಾರ್ ಮೃತಪಟ್ಟಿರುವುದು ಗೊತ್ತಾಗಿದೆ.

Facebook Comments

Sri Raghav

Admin