ಬಾಲ್ಕನಿಯಲ್ಲಿ ನಿಂತಿದ್ದ ವ್ಯಕ್ತಿಗೆ ಶೂಟ್ ಮಾಡಿ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.10-ತಮ್ಮ ಮನೆ ಬಾಲ್ಕನಿಯಲ್ಲಿ ನಿಂತಿದ್ದ ವ್ಯಕ್ತಿಯನ್ನು ಶೂಟ್ ಮಾಡಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ದೆಹಲಿಯ ನ್ಯೂ ಉಸ್ಮಾನ್‍ಪುರ್ ಪ್ರದೇಶದಲ್ಲಿರುವ ತಮ್ಮ ಮನೆಯ ಬಾಲ್ಕನಿಯಲ್ಲಿ 57 ವರ್ಷದ ಸತೀಶ್‍ಕುಮಾರ್ ಎಂಬುವರ ಮೇಲೆ ಬೈಕ್‍ನಲ್ಲಿ ಬಂದ ಮೂವರು ಅಪರಿಚಿತರು ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಯಾವುದೆ ಪ್ರಯೋಜನವಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಮಾರ್ ಅವರ ಮೇಲೆ ಗುಂಡು ಮೂವರು ಆರೋಪಿಗಳಲ್ಲಿ ಒಬ್ಬನ ಸುಳಿವು ಸಿಕ್ಕಿದ್ದು ಆತನನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

Facebook Comments

Sri Raghav

Admin