ಅರ್ಚಕರ ಹತ್ಯೆ ಕೇಸ್ : ಆರೋಪಿಗಳನ್ನು ಬಂಧಿಸಿದ ಪೋಲೀಸಿಗೆ ಸಚಿವ ನಾರಾಯಣಗೌಡ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ,ಸೆ.16 :- ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದಲ್ಲಿ ದರೋಡೆ ಮತ್ತು ಹತ್ಯೆ ಮಾಡಿದ ಆರೋಪಿಗಳನ್ನು ಹಿಡಿಯುವ ಕಾರ್ಯಚರಣೆ ವೇಳೆ ತಮಗಾದ ಆಪಾಯ ಸಂದರ್ಭಗಳನ್ನು ಲೆಕ್ಕಿಸದೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಸನ್ಮಾನಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ರಾಷ್ಟ್ರದ ರಕ್ಷಣೆಯಲ್ಲಿ ಸೈನಿಕರು ಹೇಗೆ ತಮ್ಮ ಪ್ರಾಣದ ಹಂಗನ್ನು ತೊರೆದು ರಾಷ್ಟ್ರದ ರಕ್ಷಣೆ ಮಾಡುತ್ತಾರೋ ಹಾಗೆಯೇ ಸಮಾಜದ ಸ್ವಾಸ್ತ್ಯ ಕಾಯುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹಳ ಪ್ರಮುಖವಾಗಿದೆ ಹಾಗೂ ಈ ಪ್ರಕರಣವನ್ನು ಭೇದಿಸಿ ಜಿಲ್ಲೆಯ ಜನರಲ್ಲಿ ವಿಶ್ವಾಸ ತುಂಬಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮಂಡ್ಯ ಜಿಲ್ಲೆಯಲ್ಲಿನ ಅರ್ಕೇಶ್ವರ ದೇವಾಲಯದ ಘಟನೆಯು ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಸಂದರ್ಭದಲ್ಲಿ ಪ್ರಾಣದ ಹಂಗನ್ನು ತೊರೆದು ಈ ಪ್ರಕರಣದ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿ ಕಾರ್ಯಚರಣೆ ಮಾಡಿದ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಶುಭಕೋರಿದರು.

ಈ ಪ್ರಕರಣವನ್ನು 72 ಗಂಟೆಗಳಲ್ಲೆ ಭೇದಿಸುವಲ್ಲಿ ಯಶಸ್ವಿಯಾಗಿ ಸಮಾಜಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಈ ವೇಳೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪರಶುರಾಮ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin