‘ಮಂಡ್ಯ ಜನತೆ ಆತಂಕ ಪಡುವ ಅಗತ್ಯವಿಲ್ಲ’ : ಸಚಿವ ನಾರಾಯಣಗೌಡ ಅಭಯ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಮೇ 21- ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಮುಂಬೈನಿಂದ ಬರುವವರಿಗೆ ಚೆಕ್ ಪೋಸ್ಟ್ ನಲ್ಲಿ ಆರಂಭದಲ್ಲಿ ತಡೆದು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅಭಯ ನೀಡಿದ್ದಾರೆ.

ಇನ್ನು 2 ಸಾವಿರ ಜನರಿಗೆ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್-19 ತಡೆಯಲು ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.ಚುಂಚನಗಿರಿ ಮೆಡಿಕಲï ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದೇಶದಂತೆ ಸೇವಾ ಸಿಂಧುವಿನಲ್ಲಿ ಅರ್ಜಿಗಳನ್ನು ಹಾಕಿದವರಿಗೆ ಮುಂಬೈ ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಅಲ್ಲದೆ , ಶಿಕ್ಷಕರನ್ನು ಬಳಸಿಕೊಂಡು ಯಾರಾದರೂ ಹೊಸದಾಗಿ ಗ್ರಾಮಕ್ಕೆ ಬಂದರೆ ಸಮೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲಾಗಿದೆ ಎಂದರು.ಮಂಡ್ಯ ಜಿಲ್ಲೆಗೆ ಮುಂಬೈನಿಂದ ಜನರು ಬರುತ್ತಿದ್ದಾರೆ. ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರು ಈ ನೆಲದ ಜನ. ಅವರಿಗೆ ಇಲ್ಲೆ ಕ್ವಾರಂಟೈನ್ ಸೌಲಭ್ಯ ನೀಡೋದು ನಮ್ಮ ಕರ್ತವ್ಯ.

ಎರಡು ಸಾವಿರ ಜನಕ್ಕೆ ಕ್ವಾರಂಟೈನ್ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ. ಕ್ವಾರಂಟೈನ್‍ಗೆ ಹಣದ ಕೊರತೆ ಇಲ್ಲ. ಕೋವಿಡ್-19 ವಿಚಾರದಲ್ಲಿ ಎಲ್ಲರೂ ಒಂದಾಗಿ ಹೋರಾಟ ಮಾಡೋಣ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂಬೈನಿಂದ ಬಂದವರನ್ನು ಹಂತ ಹಂತವಾಗಿ ಬಿಡಲು ಮನವಿ ಮಾಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಎರಡು ಸಾವಿರ ಜನಕ್ಕೆ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾ ನಂದ ಸ್ವಾಮೀಜಿಗಳು ಮಾತನಾಡಿ, ನಿಯಾನುಸಾರ ಮುಂಬೈನಿಂದ ಈಗಾಗಲೇ ಜಿಲ್ಲೆಗೆ ಜನರು ಬಂದಿದ್ದಾರೆ. ಅವರನ್ನು ಸೂಕ್ತವಾಗಿ ಸಾಮಾಜಿಕ ಅಂತರ ನಿಯಮವನ್ನು ಪಾಲಿಸಿ ಕ್ವಾರಂಟೈನ್ ಮಾಡಿ ಅವರಿಂದ ಇತರೆ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಚಿಕಿತ್ಸೆ ನೀಡಿ ಗುಣಮುಖ ಮಾಡಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಮಠದಿಂದ ಎಲ್ಲ ಸಹಕಾರ ನೀಡಲಾಗುವುದು. ಜಿಲ್ಲಾಡಳಿತ ಕ್ವಾರೈಟನ್ ಮಾಡಿದ ಜನರು ಯಾರು ಕೂಡ ಆಚೆ ಬರದಂತೆ ನೋಡಿಕೊಳ್ಳಬೇಕು. ಹೊರ ರಾಜ್ಯದಿಂದ 1400 ಜನ ಬಂದಿದ್ದು, ಅವರಿಗೆ ರ್ಯಾಪಿಡ್ ಟೆಸ್ಟ್ ಮಾಡಿ ಕ್ವಾರೈಟನ್ ಮಾಡಿ ಸಾಮಾಜಿಕ ಅಂತರ ಪಾಲಿಸಿ ಸೂಕ್ತ ಚಿಕಿತ್ಸೆ ನೀಡಿ ಎಂದು ಶ್ರೀಗಳು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀನಿವಾಸ್, ಸುರೇಶ್‍ಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಕಾರಿ ಡಾ.ಎಂ.ವಿ.ವೆಂಕಟೇಶ್, ಎಸ್.ಪಿ.ಪರುಷರಾಮ್ ಉಪಸ್ಥಿತರಿದ್ದರು.

Facebook Comments

Sri Raghav

Admin