ಚಾಮುಂಡೇಶ್ವರಿ ಮೋರೆಹೋದ ನಿಖಿಲ್ ಮತ್ತು ಸುಮಲತಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23-ಮತ ಎಣಿಕೆಗೂ ಮುನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ನಿಖಿಲ್‍ಕುಮಾರಸ್ವಾಮಿ ಅವರ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್‍ಗೌಡ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‍ಗೌಡ, ಸಚಿವ ಪುಟ್ಟರಾಜು ಅವರ ಪುತ್ರ ಶಿವರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಪುತ್ರ ಸಂತೋಷ್ ಆಗಮಿಸಿದ್ದರು. ನಂತರ ಮಂಡ್ಯದ ಮತ ಎಣಿಕೆ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದರು.

ಸುಮಲತಾ ಚಾಮುಂಡೇಶ್ವರಿ ಮೊರೆ : ಲೋಕಸಭಾ ಚುನಾವಣೆ ಫಲಿತಾಂಶ ಇಂದು ಹೊರಬರಲಿದೆ. ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅವರು ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಹೈವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಮೊದಲ ಸುತ್ತಿನ ಮತಎಣಿಕೆಯಲ್ಲಿ ನಿಖಿಲ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ. [ LOKSABHA ELECTIONS 2019 RESULT – Live Updates]

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin