ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಟೈಟ್ ಸೆಕ್ಯೂರಿಟಿ, ಬಿಎಸ್‍ಎಫ್ ಯೋಧರ ನಿಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ, ಮೇ 22- ರಾಷ್ಟ್ರಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಭಾರೀ ಬಿಗಿ ಭದ್ರತೆ ಮಾಡಲಾಗಿದೆ.

ಫಲಿತಾಂಶ ಕುತೂಹಲ ಘಟ್ಟದಲ್ಲಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭವಿಷ್ಯ ನಿರ್ಧಾರಕ್ಕೆ ಸರ್ಕಾರಿ ಮಹಾವಿದ್ಯಾಲಯ ಸಾಕ್ಷಿಯಾಗಲಿದೆ.

ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗ ಸಿದ್ಧತೆಯಲ್ಲಿ ತೊಡಗಿದೆ. ಮಂಡ್ಯ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ಇವಿಎಂಗಳು 16 ಭದ್ರತಾ ಕೊಠಡಿಯಲ್ಲಿ ಭದ್ರವಾಗಿದ್ದು, 15 ಕೊಠಡಿಗಳ 108 ಟೇಬಲ್‍ಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ನಡೆಯಲಿದೆ. ಮೊದಲ ಕೊಠಡಿಯಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ.

ಮಂಡ್ಯ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ತಲಾ ಒಂದೊಂದು ಕೊಠಡಿಯಲ್ಲಿ ನಡೆದರೆ, ಉಳಿದಂತೆ ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ನಗರ, ಕೆ.ಆರ್.ಪೇಟೆ ಹಾಗೂ ಮೇಲುಕೋಟೆ ಕ್ಷೇತ್ರಗಳ ಇವಿಎಂ ಮತ ಎಣಿಕೆ ಎರಡೆರಡು ಕೊಠಡಿಗಳಲ್ಲಿ ನಡೆಯಲಿದೆ.

ಬಿಎಸ್‍ಎಫ್ ಯೋಧರ ನಿಯೋಜನೆ:ಎಣಿಕೆ ಕೇಂದ್ರದ ಬಳಿ ಭದ್ರತೆಗಾಗಿ ಬಿಎಸ್‍ಎಫ್ ಯೋಧರು ಹಾಗೂ ಒಂದು ತುಕಡಿ ಸಿಆರ್‍ಪಿಎಫ್ ಯೋಧರನ್ನು ನಿಯೋಜನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಪಿ.ಸಿ.ಜಾಫರ್ ತಿಳಿಸಿದರು.

ಯೋಧರ ಜೊತೆ 800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‍ಆರ್‍ಪಿ ಪೇದೆಗಳು ಬಂದೋಬಸ್ತ್ ವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin