ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಸಂಚಾರ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.13- ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಆ.15ರಂದು ಬೆಳಗ್ಗೆ 9 ಗಂಟೆಗೆ ನಗರದ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಕವಾಯತು ಮೈದಾನದ ಒಳಗಡೆ ಮತ್ತು ಸುತ್ತಮುತ್ತಲೂ ಸಂಚಾರ ಬಂದೋಬಸ್ತ್ ಮಾಡಲಾಗಿದೆ. ಮೈದಾನಕ್ಕೆ ಆಗಮಿಸುವವರು ಗೇಟ್‍ಗಳ ಬಳಿ ಪೊಲೀಸರ ತಪಾಸಣೆಗೆ ಸಹಕರಿಸಬೇಕು, ಸಿಗರೇಟ್, ಬೆಂಕಿಪೊಟ್ಟಣ, ಬಣ್ಣದ ದ್ರಾವಣ, ಕ್ಯಾಮೆರಾ, ನೀರಿನ ಬಾಟಲ್, ಶಸ್ತ್ರಾಸ್ತ್ರ, ಕಪ್ಪು ಕರ ವಸ್ತ್ರ, ತಿಂಡಿ-ತಿನಿಸು, ಬಾವುಟ, ಪಟಾಕಿ-ಸೋಟಕ ವಸ್ತುಗಳನ್ನು ಮೈದಾನದೊಳಗೆ ತರುವುದನ್ನು ನಿಷೇಸಲಾಗಿದೆ.

ಬಿಳಿ ಕಾರ್ ಪಾಸ್‍ಗಳನ್ನು ಹೊಂದಿರುವ ಎಲ್ಲ ಗಣ್ಯರು, ಸಚಿವರು, ಸರ್ಕಾರದ ಕಾರ್ಯದರ್ಶಿಗಳು, ರಕ್ಷಣಾ ಅಕಾರಿಗಳು, ಹಿರಿಯ ಪೆÇಲೀಸ್ ಅಕಾರಿಗಳು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಪ್ರವೇಶ ದ್ವಾರ 2ರ ಮುಖಾಂತರ ಒಳ ಪ್ರವೇಶಿಸಿ ನಂತರ ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ಫಿಷ್‍ಬೋನ್ ಪಾರ್ಕಿಂಗ್ ನಿಲುಗಡೆ ಪ್ರದೇಶದಲ್ಲಿ ನಿಲುಗಡೆ ಮಾಡುವಂತೆ ಕೋರಲಾಗಿದೆ.

ಪಿಂಕ್ ಪಾಸ್‍ಗಳನ್ನು ಹೊಂದಿರುವ ಆಹ್ವಾನಿತರು ತಮ್ಮ ವಾಹನಗಳನ್ನು ಕಬ್ಬನ್‍ರಸ್ತೆ, ಮಣಿಪಾಲ್ ಸೆಂಟರ್‍ನಿಂದ ಕೆಆರ್ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‍ವರೆಗೆ ಮೈನ್‍ಗಾರ್ಡ್ ಕ್ರಾಸ್ ರಸ್ತೆ ಸಫೀನಾ ಪ್ಲಾಜಾ ಮುಂಭಾಗ, ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ ಮುಂಭಾಗ ನಿಲುಗಡೆ ಮಾಡಿ ಗೇಟ್ ನಂ.3ರಲ್ಲಿ ಕಾಲ್ನಡಿಗೆ ಮೂಲಕ ಪ್ರವೇಶ ಮಾಡಬಹುದಾಗಿದೆ.

ಕಾರ್ಯಕ್ರಮಕ್ಕೆ ಬರುವ ಎಲ್ಲ ಮಾಧ್ಯಮದವರ ವಾಹನಗಳು, ಡಿಸಿಪಿ ಮತ್ತು ಮೇಲ್ಪಟ್ಟ ಅಕಾರಿಗಳು ಹಾಗೂ ಇತರೆ ಇಲಾಖೆಗಳ ಮೇಲಕಾರಿಗಳ ವಾಹನಗಳು ಪ್ರವೇಶ ದ್ವಾರ 3ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ತುರ್ತು ಸೇವಾ ವಾಹನಗಳಾದ ಆ್ಯಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆಎಸ್‍ಆರ್‍ಪಿ, ಸಿಆರ್‍ಪಿ, ಬಿಬಿಎಂಪಿ ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ 2ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್‍ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ಅಂದು ಬೆಳಗ್ಗೆ 8.30 ರಿಂದ 10.30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್‍ವಿ ಜಂಕ್ಷನ್‍ನಿಂದ ಕಾಮರಾಜ ರಸ್ತೆ ಜಂಕ್ಷನ್‍ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

Facebook Comments

Sri Raghav

Admin