ಕೊಡಗು ಬಿಜೆಪಿ ಕಾರ್ಯದರ್ಶಿ ಕೊಲೆ ಪ್ರಕರಣದ ಆರೋಪಿಗೆ ಗುಂಡಿಟ್ಟು ಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.8- ಕೊಡಗು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಕುಮಾರ್‍ನನ್ನು ಇಂದು ಪರಿಚಿತರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಶಾಂತಿನಗರದಲ್ಲಿ ಕೊಲೆ ನಡೆದಿದೆ.

ಕಾರಿನಲ್ಲಿ ಬಂದ ನಾಲ್ವರ ಗುಂಪು ಸಂತೋಷ್ ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಂತೋಷ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2019ರ ಮಾರ್ಚ್‍ನಲ್ಲಿ ಕೊಡಗು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಸಂತೋಷ್ ಕುಮಾರ್ ಪ್ರಮುಖ ಆರೋಪಿಯಾಗಿದ್ದರು. ಬಾಲಚಂದ್ರ ಅವರನ್ನು 30 ಲಕ್ಷ ಸುಫಾರಿ ಕೊಟ್ಟು ಕೊಲೆ ಮಾಡಿಸಲಾಗಿತ್ತು.

ಮೊದಲು ಬಾಲಚಂದ್ರgರ ಸಾವನ್ನು ಅಪಘಾತ ಎಂದು ಬಿಂಬಿಸಲಾಗಿತ್ತು. ಕುಟುಂಬದ ಸದಸ್ಯರ ದೂರಿನ ಬಳಿಕ ತೀವ್ರ ತನಿಖೆ ನಡೆಸಿದ ಪೊಲೀಸರು ಸಂತೋಷ್ ಕುಮಾರ್ ಸೇರಿದಂತೆ ಮೂವರನ್ನು ಬಂಸಿದ್ದರು. ನಂತರ ಸಂತೋಷ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅಪರಿಚಿತರ ಗುಂಪು ಇಂದು ಸಂತೋಷ್ ಕುಮಾರ್‍ನನ್ನು ಹತ್ಯೆ ಮಾಡಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Facebook Comments

Sri Raghav

Admin