ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್..!
ಬೆಂಗಳೂರು : ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮ ಆಶೀರ್ವಾದದೊಂದಿಗೆ ಗುಣಮುಖನಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಆಗಾಗ ಕೈ ತೊಳೆಯುತ್ತಿರಿ. ಯವಿಟ್ಟು ನಿಮ್ಮ ಬಗ್ಗೆ ಹಾಗೂ ನಿಮ್ಮ ಹತ್ತಿರವಿದ್ದವರ ಬಗ್ಗೆಯೂ ಕಾಳಜಿ ವಹಿಸಿ ಎಂದು ಟ್ವೀಟ್ನಲ್ಲಿ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರೂ ಹೊರ ಹೋದಾಗ ಮಾಸ್ಕ್ ಧರಿಸಿರಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿರಿ ಮತ್ತು ಪದೇ ಪದೆ ಕೈ ತೊಳೆದುಕೊಳ್ಳಿ. ನಿಮ್ಮ ಮತ್ತು ನಿಮ್ಮ ಆಪ್ತರ ಆರೋಗ್ಯ ಕಾಪಾಡಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ.
ಇನ್ನೂ ಭರತ್ ಶೆಟ್ಟಿ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು, ಹೀಗಾಗಿ ಅವರ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.