ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.16-ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೊಕ್ಕಸಂದ್ರ ವಾರ್ಡ್‍ನ ರುಕ್ಮಿಣಿ ನಗರದಲ್ಲಿ ತಕ್ಷಣವೇ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೂಚಿಸಿದರು.

ಕಳೆದ ವಾರ ಸುರಿದ ಭಾರೀ ಮಳೆ ಸಂದರ್ಭದಲ್ಲಿ ರುಕ್ಮಿಣಿ ನಗರದ ರಾಜಕಾಲುವೆ ಪೈಪ್ ಒಡೆದು ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಮಂಜುನಾಥ್ ಅವರು, ಇದನ್ನು ಸರಿ ಪಡಿಸುವಂತೆ ಮನವಿ ಮಾಡಿದ್ದರು.

ಇಂದು ರುಕ್ಮಿಣಿ ನಗರಕ್ಕೆ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ತಿಂಗಳೊಳಗೆ ಒಡೆದಿರುವ ಪೈಪ್ ದುರಸ್ಥಿ ಪಡಿಸುವಂತೆ ಆದೇಶಿಸಿದರು. ಜೊತೆಗೆ ರಾಜಕಾಲುವೆ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಸೂಚಿಸಿದರು.

Facebook Comments