ಇಂದಿನಿಂದ ಭಕ್ತರಿಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ,ಜು.5- ಕೋವಿಡ್ -19 ಹಿನ್ನಲೆಯಲ್ಲಿ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಯನ್ನು ಅಳವಡಿಸಿಕೊಂಡು ಅನ್‍ಲಾಕ್‍ಗೊಳಿಸಿದ್ದು, ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದೆಲ್ಲೆಡೆ ಇಂದಿನಿಂದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ ಹಿನ್ನಲೆಯಲ್ಲಿ ಧರ್ಮಸ್ಥಳ ಕ್ಷೇತ್ರದಲ್ಲೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದ ಮಾರ್ಗ ಸೂಚಿಯನ್ವಯ ಸರಕಾರದ ಕೋವಿಡ್ ನಿಯಮಾವಳಿಯನ್ನು ಭಕ್ತರು ಅನುಸರಿಸಬೇಕು. ಮಾಸ್ಕ್ ಕಡ್ಡಾಯ ಧರಿಸಬೇಕು, ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ. ಈಗಾಗಲೇ ಕ್ಷೇತ್ರದಲ್ಲಿ ಸ್ಯಾನಿಟೈಸೇಷನ್ ಸಿಂಪಡಿಸಲಾಗಿದ್ದು, ಕ್ಷೇತ್ರದಿಂದ ಸೂಕ್ತ ಕ್ರಮಕೈಗೊಳ್ಳಲಾಗಿದೆ.

ಸರಕಾರದ ಎಲ್ಲಾ ಮಾರ್ಗಸೂಚಿಯನ್ನು ಕೇತ್ರ ಸಂದರ್ಶನ ಮಾಡುವ ಭಕ್ತರು ಪಾಲಿಸಬೇಕು ಎಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin