ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ಮರಿತಿಬ್ಬೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

Maritibbegowda-01

ಬೆಂಗಳೂರು, ಜೂ.22- ಇತ್ತೀಚೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಿದ್ದ ಪರಿಷತ್ತಿನ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಅವರು ಇಂದು ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯ ಮರಿತಿಬ್ಬೇಗೌಡ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.  ಸತ್ಯ, ನಿಷ್ಠೆ ಹಾಗೂ ಮಲೈಮಹದೇಶ್ವರ ಸ್ವಾಮಿ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಸದಸ್ಯರಾದ ಕಾಂತರಾಜು, ಚೌಡರೆಡ್ಡಿ ತೂಪಲ್ಲಿ, ಮಾಜಿ ಸದಸ್ಯ ರಮೇಶ್ ಬಾಬು ಮತ್ತಿತರರು ಶುಭ ಕೋರಿದರು.

Facebook Comments

Sri Raghav

Admin