ಮಾಸ್ಕ್ ಇಲ್ಲದ 300 ಮಂದಿಗೆ ದಂಡ : 30,000 ರೂ. ವಸೂಲಿ

ಈ ಸುದ್ದಿಯನ್ನು ಶೇರ್ ಮಾಡಿ

ನೋಯ್ಡಾ, ಜ.2- ಮಾಸ್ಕ್ ಧರಿಸದೆ ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದ 300ಕ್ಕೂ ಅಧಿಕ ಮಂದಿಯನ್ನು ಪೊಲೀಸರು ತಡೆದು ದಂಡ ವಸೂಲಿ ಮಾಡಿದ್ದಾರೆ. ನಗರದಲ್ಲಿ ಶುಕ್ರವಾರ ಸಾರ್ವಜನಿಕರು ರೂಪಾಂತರಗೊಂಡ ಕೊರೊನಾ ಸೋಂಕು ಹರಡುವಿಕೆಗೆ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸದೆ ಹಾಗೂ ಮಾಸ್ಕ್ ಧರಿಸದೆ ಓಡಾಡುತ್ತಿದ್ದ 303 ಮಂದಿಗೆ ಚಲನ್ ನೀಡಿ 30 ಸಾವಿರದ 300 ರೂ. ದಂಡ ವಸೂಲು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕಚೇರಿಯ ಮಾಹಿತಿಯಿಂದ ತಿಳಿದುಬಂದಿದೆ.

ಗೌತಮ್ ಬುದ್ಧನಗರ ಜಿಲ್ಲೆಯಲ್ಲಿ 25 ಸಾವಿರ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 90 ಮಂದಿ ಸಾವನ್ನಪ್ಪಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅದರ ಅನುಸಾರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಅನುಸರಿಸುತ್ತಿದ್ದಾರೆ ಎಂದು ಆಯುಕ್ತರು ಹೇಳಿದ್ದಾರೆ.

Facebook Comments