ಬೆಂಗಳೂರಲ್ಲಿ ಮಾಸ್ಕ್ ಧರಿಸದವರಿಂದ 57.39 ಲಕ್ಷ ರೂ. ದಂಡ ವಸೂಲಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆ ನಗರಾದ್ಯಂತ ಮಾರ್ಷಲ್‌ಗಳು ಹಾಗೂ ಪೊಲೀಸ್ ಅಧಿಕಾರಿಗಳು ಎಲ್ಲಾ 198 ವಾರ್ಡ್ಗಳ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು(ಮಾಸ್ಕ್) ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಓಡಾಡುವ/ವಾಹನಗಳಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ದಂಡ ವಿಧಿಸಲಾಗುತ್ತಿದೆ.

ಅದರಂತೆ ಜೂನ್ ತಿಂಗಳಲ್ಲಿ ಮಾಸ್ಕ್ ಧರಿಸದ 27,421 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,267 ಮಂದಿ ಸೇರಿದಂತೆ 28,688 ಮಂದಿಯಿAದ ಒಟ್ಟು 57.39 ಲಕ್ಷ ರೂ. ದಂಡ ಸಂಗ್ರಹ ಮಾಡಲಾಗಿರುತ್ತದೆ.

Facebook Comments

Sri Raghav

Admin