ಜಾಗತಿಕ ಉಗ್ರ ಅಜರ್ ಆಸ್ತಿ ಮುಟ್ಟುಗೋಲಿಗೆ ಪಾಕ್ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಇಸ್ಲಾಮಾಬಾದ್, ಮೇ 4- ಜೈಷ್-ಎ-ಮಹಮದ್ (ಜೆಇಎಂ) ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‍ನನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತವಾಗಿರುವ ಪಾಕಿಸ್ತಾನ ಆತನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ.

ಅಲ್ಲದೇ ಅಂತಾರಾಷ್ಟ್ರೀಯ ಭಯೋತ್ಪಾದಕನಿಗೆ ಪ್ರವಾಸದ ಮೇಲೆ ನಿರ್ಬಂಧ ವಿಧಿಸಿದೆ. ಅಲ್ಲದೇ ಜೆಇಎಂ ಮುಖ್ಯಸ್ಥ ಶಸ್ತಾಸ್ತ್ರಗಳು ಮತ್ತು ಮದ್ದುಗುಂಡುಗಳ ಮಾರಾಟ ಮತ್ತು ಖರೀದಿ ಮೇಲೂ ಪಾಕಿಸ್ತಾನ ಸರ್ಕಾರ ನಿಷೇಧ ಹೇರಿದೆ.

ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್-ಖೈದಾ ಉಗ್ರಗಾಮಿ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲು ರಚನೆಯಾದ ವಿಶ್ವಸಂಸ್ಥೆಯ ದಿಗ್ಬಂಧನ ಸಮಿತಿ ಬುಧವಾರ ಅಜರ್‍ನನ್ನು ಜಾಗತಿಕ ಭಯೋತ್ಪಾಕ ಎಂದು ಘೋಷಿಸಿ ಕಪ್ಪು ಪಟ್ಟಿಗೆ ಸೇರಿಸಿತು.

ಈ ಮಹತ್ವದ ಬೆಳವಣಿಗೆ ಹಿನ್ನಲೆಯಲ್ಲಿ ತನ್ನ ನೆಲದಲ್ಲೇ ಇರುವ ಅಜರ್ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಪಾಕಿಸ್ತಾನ ಆತನ ಆಸ್ತಿ-ಪಾಸ್ತಿಗಳ ಜಪ್ತಿ, ಪ್ರವಾಸ ನಿಷೇಧ ಹಾಗೂ ಶಸ್ತ್ರಾಸ್ತ್ರಗಳ ನಿರ್ಬಂಧ ವಿಧಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ