ಯುಪಿ-ಉತ್ತರಖಂಡ್ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

ಲಖ್ನೋ,ಜೂ.27- ಉತ್ತರ ಪ್ರದೇಶದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಪಕ್ಷ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಇಲ್ಲದೆ ಸೆಣಸಲಿದೆ ಎಂದು ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಇಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಐಎಂಐಎಂ) ಜೊತೆ ಮೈತ್ರಿ ಒಪ್ಪಂದವನ್ನು ಅಲ್ಲೆಗೆಳೆದಿರುವ ಮಾಯಾವತಿ, ಬಿಎಸ್ಪಿ ಯುಪಿ ಮತ್ತು ಉತ್ತರಾಖಂಡನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ರ್ಪಸುತ್ತದೆ.

ಆದರೆ ಪಂಜಾಬ್‍ನಲ್ಲಿ ಶಿರೋಮಣಿ ಅಕಾಲಿ ದಳದೊಂದಿಗೆ ಪಕ್ಷ ಕೈಜೋಡಿಸಲಿದೆ ಎಂದು ಖಚಿತಪಡಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಬಿಎಸ್ಪಿ ಮುಂದಿನ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಒವೈಸಿಯ ಎಐಐಎಂಐಎಂನೊಂದಿಗೆ ಹೋರಾಡಲಿದೆ ಎಂಬ ಸುದ್ದಿ ಮಾದ್ಯಮಗಳಲ್ಲಿ ಹರಿದಾಡುತ್ತಿದೆ.

ಇದು ಸುಳ್ಳು. ಮತದಾರರನ್ನು ದಾರಿ ತಪ್ಪಿಸುವ ಕೆಲಸವಾಗಿದೆ ಎಂದು ದೂರಿದ್ದಾರೆ. 2022ರಲ್ಲಿ ನಡೆಯಲಿರುವ ಉತ್ತರಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳನ್ನು ಪಕ್ಷ ಏಕಾಂಗಿಯಾಗಿಯೇ ಎದುರಿಸಲಿದೆ. ಪಂಜಾಬ್ ಹೊರತುಪಡಿಸಿ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಬಿಎಸ್‍ಪಿಯ ಬಗ್ಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸಗಳಾಗುತ್ತಿವೆ. ಇಂಥವನ್ನು ತಡೆಗಟ್ಟಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಸದ ಸತೀಶ್‍ಚಂದ್ರ ಮಿಶ್ರಾ ಅವರನ್ನು ಹೊಸ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Facebook Comments

Sri Raghav

Admin