ಇಂಧನ ಬೆಲೆ ಏರಿಕೆ : ಮಾಯಾವತಿ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ಫೆ.23 (ಪಿಟಿಐ)- ಬಹುಜನ ಸಮಾಜ ಪಾರ್ಟಿ (ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ ಅವರು ದೇಶದಲ್ಲಿ ದಿನೇ ದಿನೇ ಏರುತ್ತಿರುವ ಇಂಧನ ಬೆಲೆಗಳನ್ನು ತೀವ್ರವಾಗಿ ಖಂಡಿಸಿದ್ದಲ್ಲದೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‍ಪಿಜಿ ದರಗಳಲ್ಲಿ ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕ ಕಲ್ಯಾಣದ ಹೆಸರಿನಲ್ಲಿ ಹಣವನ್ನು ಸಂಗ್ರಹಿಸುವ ತಾರ್ಕಿಕತೆಯನ್ನು ಸಂಪೂರ್ಣವಾಗಿ ಅನ್ಯಾಯ ಎಂದು ಕರೆಯಲಾಗುತ್ತದೆ ಎಂದರು.

ಕೋವಿಡ್-19 ಸಾಂಕ್ರಾಮಿಕದಿಂದ ಈಗಾಗಲೇ ದೇಶದ ಜನತೆ ತೊಂದರೆಗೀಡಾದ್ದಾರೆ. ಅದರಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಮತ್ತಷ್ಟು ನೆಮ್ಮದಿ ಕೆಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ನಿರಂತರವಾಗಿ ಮತ್ತು ಅನಗತ್ಯವಾಗಿ ಹೆಚ್ಚಿಸುವ ಮೂಲಕ ನಿರುದ್ಯೋಗ, ಹಣದುಬ್ಬರ ಮುಗಿಲುಮುಟ್ಟಿದೆ. ಇಂತಹ ಸಮಯದಲ್ಲಿ ಈ ತೆರಿಗೆ ಹೆಚ್ಚಳದ ಮೂಲಕ ಸಾರ್ವಜನಿಕ ಕಲ್ಯಾಣಕ್ಕಾಗಿ ಹಣ ಸಂಗ್ರಹಿಸುವ ಸರ್ಕಾರದ ತರ್ಕವು ನ್ಯಾಯಯುತವಲ್ಲ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

Facebook Comments