ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಸಭೆಯಲ್ಲಿ ಬಿಎಸ್ಪಿಪಾಲ್ಗೊಳ್ಳುತ್ತಿಲ್ಲ : ಮಾಯಾವತಿ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ,ಜ.13- ಸಿಎಎ ಮತ್ತು ಎನ್‌ಆರ್‌ಸಿ ಕುರಿತಂತೆ ಕಾಂಗ್ರೆಸ್ ನೇತೃತ್ವದಲ್ಲಿ ಕರೆದಿರುವ ವಿಪಕ್ಷ ಸಭೆಗಳಲ್ಲಿ ತಾವು ಪಾಲ್ಗೊಳ್ಳುತ್ತಿಲ್ಲ ಎಂದು ಬಿಎಸ್ಪಿ ವರಿಷ್ಠ ನಾಯಕಿ ಮಾಯಾವತಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜಸ್ತಾನ್‍ನಲ್ಲಿ ಕಾಂಗ್ರೆಸ್‍ನವರು ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಕಡೆಗಣಿಸಿ ನಿರ್ನಾಮ ಮಾಡಲು ಮುಂದಾಗಿದ್ದಾರೆ.

ಹೀಗಿರುವಾಗ ಸಭೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿಲ್ಲ. ಸಿಎಎ ಮತ್ತು ಎನ್‍ಆರ್‍ಐಸಿ ಬಗ್ಗೆ ನಮಗೂ ವಿರೋಧವಿದೆ ಎಂದು ಕೂಡ ಅವರು ಹೇಳಿದ್ದಾರೆ. ರಾಜಸ್ತಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ನಾವು ಹೊರಗಿನಿಂದ ಬೆಂಬಲ ನೀಡಿದ್ದರೂ ಸಹ ನಮ್ಮ ಪಕ್ಷದ ಶಾಸಕರನ್ನು ಹೈಜಾಕ್ ಮಾಡಲು ಕುತಂತ್ರನಡೆಸಲಾಗುತ್ತಿದೆ. ಅದರ ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದರಿಂದಾಗಿ ಕಾಂಗ್ರೆಸ್ ಸಭೆಗೆ ಪಾಲ್ಗೊಂಡರೆ ನಮ್ಮ ಕಾರ್ಯಕರ್ತರಿಗೆ ತಪ್ಪು ತಿಳುವಳಿಕೆ ನೀಡಿದಂತಾಗುತ್ತದೆ ಎಂದು ಮಾಯಾವತಿ ಹೇಳಿದ್ದಾರೆ. ಇದೇ ವೇಳೆ ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ನೇತೃತ್ವದ ಸಭೆಯಿಂದ ದೂರ ಉಳಿಯಲು ಆಮ್‍ಆದ್ಮಿ ಪಾರ್ಟಿ ಕೂಡ ದೂರ ಉಳಿದಿದೆ ಎಂದು ತಿಳಿದು ಬಂದಿದೆ.

Facebook Comments