ಮೈಸೂರು ಮೇಯರ್‌ಗೆ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಏ.2- ಮೇಯರ್ ರುಕ್ಮಿಣಿ ಹಾಗೂ ಅವರ ಪತಿ ಮಾದೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಂಪತಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ತಮ್ಮನ್ನು ಭೇಟಿ ಮಾಡಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮೇಯರ್ ಮನವಿ ಮಾಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಕಚೇರಿ ಸಿಬ್ಬಂದಿ, ಅವರ ನಿವಾಸದ ಸಿಬ್ಬಂದಿ ಸೇರಿದಂತೆ ಎಲ್ಲರೂ ಈಗ ತಪಾಸಣೆ ಮಾಡಿಸಿಕೊಳ್ಳಬೇಕು. ಕಳೆದ ಒಂದು ವಾರದಿಂದ ತಮ್ಮನ್ನು ಭೇಟಿ ಮಾಡಿದವರು, ಕಚೇರಿಗೆ ಬರುತ್ತಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಮೈಸೂರಿನಲ್ಲೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮಹಾನಗರ ಪಾಲಿಕೆ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ಮಹಾನಗರ ಪಾಲಿಕೆ ಮೇಯರ್ ಹಾಗೂ ಅವರ ಪತಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈಗ ಅವರು ಚಿಕಿತ್ಸೆಗೆ ದಾಖಲಾಗಿದ್ದಾರೆ.

ರಾಜ್ಯದಲ್ಲೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಜನ ಎಚ್ಚರಿಕೆಯಿಂದ ಇರಬೇಕು. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾಸ್ಕ್, ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

Facebook Comments