ಜ.18ಕ್ಕೆ ಮೈಸೂರು ಮೇಯರ್ ಚುನಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜ.7- ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆ ಇದೇ 18ರಂದು ನಡೆಯಲಿದೆ.ಎರಡನೆ ಅವಧಿಗೆ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ,ಉಪಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಸರ್ಕಾರ ಮೀಸಲಾತಿ ನಿಗದಿಪಡಿಸಿದೆ.

ಈ ಹಿನ್ನೆಲೆಯಲ್ಲಿ ಜ.18ರಂದು ಬೆಳಗ್ಗೆ 9.30ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಂತರ ಅದೇ ದಿನ ನಾಮಪತ್ರ ಪರಿಶೀಲನೆ ನಡೆಸಿ ಅಗತ್ಯಬಿದ್ದರೆ ಅದೇ ದಿನ 11.30ಕ್ಕೆ ಮತದಾನ ನಡೆಸಲಾಗುತ್ತದೆ.

ಇದರೊಂದಿಗೆ ನಾಲ್ಕು ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಈ ಬಾರಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಲಿವೆ. ಕಳೆದ ಬಾರಿ ಕಾಂಗ್ರೆಸ್ ಮೇಯರ್ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ ಜೆಡಿಎಸ್‍ಗೆ ಮೇಯರ್ ಸ್ಥಾನ ಬಿಟ್ಟುಕೊಡಲಿದೆ.

ಎರಡು ಪಕ್ಷಗಳ ವರಿಷ್ಠರು ಮೈತ್ರಿ ಮುಂದುವರಿಸಲು ಹೇಳಿದ್ದು, ಮೇಯರ್ ಅಭ್ಯರ್ಥಿಗಳ ಆಯ್ಕೆಯನ್ನು ಚುನಾವಣೆಗೆ ಎರಡು ದಿನಗಳ ಮುನ್ನ ಘೋಷಿಸಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್ ತಿಳಿಸಿದ್ದಾರೆ.

Facebook Comments