ಯಲಹಂಕ ‘ಫೈರ್ ಶೋ’ ಬಗ್ಗೆ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು…?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.24- ಏರೋ ಶೋ ಕಾರ್ಯಕ್ರಮ ಕೇಂದ್ರ- ರಾಜ್ಯ ಸರ್ಕಾರ ಒಟ್ಟಾಗಿ ನಡೆಸುವ ಕಾರ್ಯ. ಕೇಂದ್ರದ ನಿರ್ವಹಣೆಯಲ್ಲಿದ್ದ ಜಾಗದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಮ್ಮ ಪೊಲೀಸರು ಸರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನಿನ್ನೆ ನಡೆದ ಅಗ್ನಿ ದುರಂತದಲ್ಲಿ 277 ಕಾರುಗಳು ಸುಟ್ಟು ಕರಕಲಾದ ಯಲಹಂಕ ವಾಯುನೆಲೆಯ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರದ ನಿರ್ವಹಣೆಯಲ್ಲಿದ್ದ ಜಾಗದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಿಲಿಟರಿ ಆವರಣದಲ್ಲಿ ಸಿಎಸ್‍ಎಫ್ ಏರ್ ಫೋರ್ಸ್  ಪೊಲೀಸರ ಜವಾಬ್ದಾರಿ ಇರುತ್ತದೆ. ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಮ್ಮ ಪೊಲೀಸರು ಹೊರಗೆ ಕಾರ್ಯ ನಿರ್ವಹಿಸುತ್ತಿದ್ದರು.  ಅಗ್ನಿ ದುರಂತ ಸಂಭವಿಸಿದ 4 ನಿಮಿಷದಲ್ಲಿ ಅಗ್ನಿಶಾಮಕ ದಳದವರು ತೆರಳಿ ಬೆಂಕಿ ನಂದಿಸುವಲ್ಲಿ ಶ್ರಮ ವಹಿಸಿದ್ದಾರೆ ಎಂದು ಹೇಳಿದರು.

ಯಲಹಂಕದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ವೇಳೆ ಗೇಟ್ ನಂಬರ್ 5 ರಲ್ಲಿ ನಿನ್ನೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 300 ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿದ್ದವು.

Facebook Comments

Sri Raghav

Admin