ನ್ಯೂಸ್ ಮೀಡಿಯಾ ಪ್ರಶಸ್ತಿ ಪ್ರಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28-ನ್ಯೂಸ್ ಮೀಡಿಯಾ ಅಸೋಸಿಯೇಷನ್ ಆಫ್ ಕರ್ನಾಟಕ ನಗರದಲ್ಲಿ ನಿನ್ನೆ ಮೂರನೇ ವಾರ್ಷಿಕ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶ, ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿತ್ತು.

ಹಿರಿಯ ಮತ್ತು ಕಿರಿಯ ಮಾಧ್ಯಮ ಮಿತ್ರರಿಗೆ ನ್ಯೂಸ್ ಮೀಡಿಯಾ ಪ್ರಶಸ್ತಿ-2018 ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನ್ಯೂಸ್ ಮೀಡಿಯಾ ಸಾಧನಾ ಪ್ರಶಸ್ತಿ-2019 ನೀಡಿ ಗೌರವಿಸಲಾಯಿತು.

ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ವಿವಿಧ ಕ್ಷೇತ್ರಗಳ ಗಣ್ಯರು, ಸರ್ಕಾರದ ಉನ್ನತಾಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದರು. ಅಸೋಸಿಯೇಷನ್ ಅಧ್ಯಕ್ಷ ವೆಂಕಟೇಶ್ ಪೈ ಮತ್ತು ಪಧಾಧಿಕಾರಿಗಳು ಉಪಸ್ಥಿತರಿದ್ದರು.  ಕಾರ್ಯಕ್ರಮಕ್ಕೂ ಮುನ್ನ ಖ್ಯಾತ ಗಾಯಕ ಕಡಬಗೆರೆ ಮುನಿರಾಜು ಮತ್ತು ತಂಡದವರು ಸುಗಮ ಸಂಗೀತದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

Facebook Comments