ವೈದ್ಯಕೀಯ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾಥಿಗಳಿಗೆ ಗುಡ್ ನ್ಯೂಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.27-ಬೆಮಗಳೂರು, ಜು.27- ರಾಜ್ಯ ಸರ್ಕಾರ ವೈದ್ಯಕೀಯ  ಕಾಲೇಜಿನ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಹೆಚ್ಚಳ ಮಾಡಿದೆ.

ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವೈದ್ಯಕೀಯ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಕೊನೆಗೂ ಹಸಿರು ನಿಶಾನೆ ತೋರಿದೆ.

7ನೇ ವೇತನ ಆಯೋಗದ ಅನ್ವಯ ವೈದ್ಯಕೀಯ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಸುಮಾರು 2500 ವೈದ್ಯಕೀಯ ಸಿಬ್ಬಂದಿಗೆ ವಾರ್ಷಿಕ 137 ಕೋಟಿ ರೂ. ವೆಚ್ಚವಾಗಲಿದೆ.

ಕೋವಿಡ್ ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವು ರಾಜ್ಯಗಳು ವೈದ್ಯರ ವೇತನ ಕಡಿತಗೊಳಿಸಿರುವ ಸಂದರ್ಭದಲ್ಲಿ 7ನೇ ವೇತನ ಆಯೋಗ ಅನ್ವಯ ವೈದ್ಯಕೀಯ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ಆರ್ಥಿಕ ಸಂಕಷ್ಟದ ನಡುವೆಯೂ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಶೇ.40-45 ಹೆಚ್ಚಿಸುವ ಮೂಲಕ 5 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಬೇಡಿಕೆಯನ್ನು ಪೂರೈಸಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಹಾಗೂ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಿನ್ನೆ ಎರಡು ಸಿಲಿಂಡರ್ ಸ್ಫೋಟಗೊಂಡು ಇಂಟರ್ನ, ನರ್ಸ್ ಹಾಗೂ ವಾರ್ಡ್ ಬಾಯ್‍ಗೆ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದು ನನಗೆ ತುಂಬಾ ನೋವಾಗಿದೆ.

ಇಂತಹ ಘಟನೆಗಳು ಇನ್ನು ಮುಂದೆ ಘಟಿಸದಂತೆ ಕ್ರಮ ವಹಿಸಲು ಸೂಚಿಸಿದ್ದು, ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

Facebook Comments

Sri Raghav

Admin