ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.1- ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಹೊಸ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ವಿಧಾನಪರಿಷತ್‍ಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಎಸ.್ವ.ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ವೈದ್ಯಕೀಯ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಟೆಂಡರ್‍ಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭವಾಗಿವೆ.

ಚಿಕ್ಕಬಳ್ಳಾಪುರ 508.11 ಕೋಟಿ, ಹಾವೇರಿ 327.46 ಕೋಟಿ, ಯಾದಗಿರಿ 309.54 ಕೋಟಿ ಹಾಗೂ ಚಿಕ್ಕಮಗಳೂರು 307.79 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಶೇ.40, ಉಳಿದ ಕಾಲೇಜುಗಳ ಶೇ.5ರಿಂದ 8ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ. ಹುಬ್ಬಳ್ಳಿಯ ಮೂರು ಸಾವಿರ ಮಠ ಮೆಡಿಕಲ್ ಕಾಲೇಜಿಗೆ 2021.22 ಸಾಲಿನಲ್ಲಿ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರಾರಂಭಿಸಲು ಇಸಿ ಅಥವಾ ಎಫ್‍ಸಿ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಒಟ್ಟು 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎರಡು ಇಎಸ್‍ಐ ಕಾಲೇಜುಗಳು ಹಾಗೂ 39 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ ಎಂದರು.

Facebook Comments