ನಾರಾಯಣಗುರು ಹೆಸರಿನಲ್ಲಿ ವೈದ್ಯಕೀಯ ಕಾಲೇಜು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು- ಮುಂಬರುವ ಬಜೆಟ್‍ನಲ್ಲಿ ನಾರಾಯಣಗುರು ಅವರ ಹೆಸರಿನಲ್ಲಿ ರಾಜ್ಯದ ಯಾವುದಾದರೊಂದು ಪ್ರಮುಖ ಸ್ಥಳದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಆರ್ಯ ಈಡಿಗ ಬಿಲ್ಲವ ನಾಮದಾರಿ ನಿಯೋಗವು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶಾಸಕರಾದ ಕುಮಾರ್‍ಬಂಗಾರಪ್ಪ, ಸುನಿಲ್‍ನಾಯಕ್, ಸಂಘದ ಅಧ್ಯಕ್ಷ ತಿಮ್ಮೇಗೌಡ ಮತ್ತಿತರರು ಸಮುದಾಯದ ಗುರುಗಳಾದ ನಾರಾಯಣಗುರುಗಳ ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮನವಿ ಮಾಡಿತು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಬಾರಿ ಬಜೆಟ್‍ನಲ್ಲಿ ನಾರಾಯಣಗುರುಗಳ ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಲಾಗುವುದು. ಈ ಸಂಬಂಧ ವೈದ್ಯಕೀಯ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚೆ ನಡೆಸುವ ಆಶ್ವಾಸನೆ ನೀಡಿದರು.

ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿನ ಯಾವುದಾದರೊಂದು ಭಾಗದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಸಂಬಂಧ ನಿವೇಶನ ಗುರುತಿಸಿ ಮುಖ್ಯಮಂತ್ರಿಗೆ ಮನವಿ ಮಾಡಲಿದ್ದೇವೆ ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ನಾನು ನಿಮ್ಮ ಸಮುದಾಯದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಿದ್ದೇನೆ. ಬರುವ ಬಜೆಟ್‍ನಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಾಡಬಹುದಾದ ಕಾರ್ಯಕ್ರಮಗಳ ಪಟ್ಟಿಯನ್ನು ನೀಡುವಂತೆ ಸಿಎಂ ಸೂಚಿಸಿದ್ದಾರೆ. ಮತ್ತೊಮ್ಮೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದರು.

Facebook Comments