Friday, March 29, 2024
Homeರಾಷ್ಟ್ರೀಯರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು

ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು

ಬೆಂಗಳೂರು, ಡಿ.9- ರಾಮನಗರ ಮತ್ತು ಕನಕಪುರ ಎರಡೂ ಕಡೆಗಳಲ್ಲಿ 2024-25 ನೇ ಸಾಲಿನಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಆಸಕ್ತಿ ಹೊಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶಾಸಕ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ರಾಜ್ಯದಲ್ಲಿ 24 ಸರ್ಕಾರಿ ಮತ್ತು 46 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ದಾವಣಗೆರೆ, ಉಡುಪಿ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಬಾಗಲಕೋಟೆ, ದಕ್ಷಿಣ ಕನ್ನಡ, ವಿಜಯನಗರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲ ಎಂದು ತಿಳಿಸಿದ್ದಾರೆ.

ಅಸ್ಸಾಮಿ ಮುಸ್ಲಿಮರ ಆರ್ಥಿಕ ಮೌಲ್ಯಮಾಪನಕ್ಕೆ ನಿರ್ಧಾರ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಬೇಕೆಂದು ಸರ್ಕಾರದ ನೀತಿಯಾಗಿದೆ. ಪ್ರಸ್ತುತ ವರ್ಷದಲ್ಲಿ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಇಲ್ಲ. ಅನುದಾನ ಲಭ್ಯತೆ ಆಧರಿಸಿ ಹಂತಹಂತವಾಗಿ ಜಿಲ್ಲೆಗೊಂದು ಕಾಲೇಜುಗಳನ್ನು ಆರಂಭಿಸಲಾಗುವುದು.

ಮೆಡಿಕಲ್ ಕಾಲೇಜಿಗೆ 610 ಕೋಟಿ ರೂ. ಅನಾವರ್ಥಕ ವೆಚ್ಚ, 600 ಕೋಟಿ ರೂ. ವಾರ್ಷಿಕ ಆವರ್ತಕ ವೆಚ್ಚದ ಅವಶ್ಯಕತೆಯಿದೆ. ಅನುದಾನದ ಲಭ್ಯತೆ ಆಧರಿಸಿ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

RELATED ARTICLES

Latest News