ಜೂನಿಯರ್ ಚಿರುಗೆ ಜನ್ಮ ನೀಡಿದ ಮೇಘನಾ, ಸಂಭ್ರಮದಲ್ಲಿ ಸರ್ಜಾ ಫ್ಯಾಮಿಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.22 : ನಟ ಚಿರಂಜೀವಿ ಸಜರ್ ಅವರ ಪತ್ನಿ ಮೇಘನಾ ರಾಜ್ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೇಘನಾ ರಾಜ್ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮೇಘನಾ ರಾಜ್ ಅವರಿಗೆ ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಮೇಘನಾ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗು ಜನ್ಮ ನೀಡಿದ್ದಾರೆ.

ಮೇಘನಾ ರಾಜ್ ಗೆ ಗಂಡು ಮಗು ಜನಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಎದುರು ಚಿರಂಜೀವಿ ಸಜರ್ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರು ನಿಶ್ಚಿತಾರ್ಥ ದಿನವಾದ ಇಂದು ಮಗು ಜನಿಸಿರುವುದು ಎರಡು ಕುಟುಂಬದವರಲ್ಲಿ ಸಂತಸ ಮೂಡಿದೆ.

Facebook Comments