ಮೇಕೆದಾಟು : ಹೆಚ್ಚುವರಿ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.8 (ಪಿಟಿಐ)- ಮೇಕೆದಾಟು ಅಣೆಕಟ್ಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕ ಕಾನೂನು ಸಮರ ಮುಂದುವರಿಸಿದೆ.  ಮೇಕೆದಾಟು ಬಳಿ ಡ್ಯಾಂ ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ನೀಡಬಾರದೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಗೆ ರಾಜ್ಯ ಇಂದು ಸುಪ್ರೀಂಕೋರ್ಟ್‍ನಲ್ಲಿ ವಾದ ಮಂಡಿಸಿತು.

ತಮಿಳುನಾಡು ಆಕ್ಷೇಪಣೆಯಲ್ಲಿರುವ ಅಂಶಗಳಿಗೆ ಪ್ರತಿಯಾಗಿ ಹೆಚ್ಚುವರಿ ಪ್ರಮಾಣಪತ್ರಗಳನ್ನು(ಅಫಿಡಾವಿಟ್‍ಗಳು) ಸಲ್ಲಿಸಲು ತನಗೆ ಕಾಲಾವಕಾಶ ಬೇಕು ಎಂದು ನ್ಯಾಯಮೂರ್ತಿ ಉದಯ್ ಯು. ಲಲಿತ್ ನೇತೃತ್ವದ ನ್ಯಾಯಪೀಠದ ಮುಂದೆ ಕರ್ನಾಟಕ ಮನವಿ ಸಲ್ಲಿಸಿತು.

ಕರ್ನಾಟಕ ಮತ್ತು ತಮಿಳುನಾಡು ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು ಹೆಚ್ಚುವರಿ ಪ್ರಮಾಣಪತ್ರಗಳನ್ನು ಸಲ್ಲಿಸಲು ರಾಜ್ಯಕ್ಕೆ ಅನುಮತಿ ನೀಡಿ ಈ ಪ್ರಕರಣದ ವಿಚಾರಣೆಯನ್ನು ಜನವರಿ 23ಕ್ಕೆ ಮುಂದೂಡಿದೆ.

Facebook Comments