ಕೂಡಲೇ ಮೇಕೆದಾಟು ಯೋಜನೆ ಆರಂಭಿಸಲು ವಾಟಾಳ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.6- ಮೇಕೆದಾಟು ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.  ಮೇಕೆದಾಟು ಯೋಜನೆ  ಪ್ರಾರಂಭಿಸಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಯೋಜನೆ ಪ್ರಾರಂಭಿಸಿ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಿ. ಇಲ್ಲದಿದ್ದರೆ ಅಧಿಕಾರ ಬಿಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆಗಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಕರ್ನಾಟಕ ಬಂದ್ ಕೂಡ  ನಡೆಸಿದ್ದೇವೆ. ಕನ್ನಡಪರ ಸಂಘಟನೆಗಳೊಂದಿಗೆ ರಾಜ್ಯಾದ್ಯಂತ  ಉಗ್ರ ಹೋರಾಟ ಮಾಡಿ ರಾಜ್ಯದ ಗಮನ ಸೆಳೆದಿದ್ದೇವೆ.

ಈ ಯೋಜನೆ ಪ್ರಾರಂಭಿಸಲು  ಅವಕಾಶವಿದ್ದರೂ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ, ನಾವು ಮುನ್ನಗದಿದ್ದರೆ ತಮಿಳುನಾಡು ತಗಾದೇ ತೆಗೆಯುತ್ತಲೇ ಇರುತ್ತದೆ. ನಮ್ಮ ನೆಲದಲ್ಲಿ ನಮ್ಮ ನೀರಿನ ಬಳಕೆ ಮಾಡಿಕೊಳ್ಳಲು ಯಾರ ಅನುಮತಿಯೂ ಬೇಕಾಗಿಲ್ಲ.

ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಪ್ರಾರಂಭಿಸಬೇಕು. ಇಲ್ಲದಿದ್ದರೆ ಮತ್ತೆ ನಾವು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Facebook Comments